ನೂತನ ಸಚಿವ ಅಜಯ ಸಿಂಗ್‌ಗೆ ತುಳಜಾ ಭವಾನಿ ದೇವಸ್ಥಾನದಲ್ಲಿ ಭವ್ಯ ಸ್ವಾಗತ, ಸನ್ಮಾನ
ಲಿಂಗಸುಗೂರು, ಆ. 7: ರಾಜ್ಯದ ನೂತನ ಸಚಿವ ಅವರು ಗುರುವಾರ ಲಿಂಗಸುಗೂರಿನ ಐತಿಹಾಸಿಕ ತುಳಜಾ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಚಿವರ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಭಕ್ತರು ಹಾಗೂ ಮುಖಂಡರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಅವರು ಸಚಿವರೊಂದಿಗೆ ಸಾಥ್ ನೀಡಿದರು. ಸತ್ಯನಾರಾಯಣ್ ಸಿಂಗ್, ದಶರಥ ಮಿರಜಕರ, ಆನಂದ್, ರಾಘವೇಂದ್ರ, ಶ್ಯಾಮ್, ರಾಜಶೇಖರ್, ಶ್ರೀನಿವಾಸ್, ನಾರಾಯಣ್, ಯಲ್ಲಪ್ಪ, ಆನಂದ್, ಶೋಭಾ ಆನಂದ್, ಸುಗುಂದಿ ವಿಜಯಕುಮಾರ್ ಸೇರಿದಂತೆ ಅನೇಕ ಮುಖಂಡರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಸಚಿವ ಅಜಯ ಸಿಂಗ್ ಅವರನ್ನು ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಿದರು. ದೇವಸ್ಥಾನದ ಅಭಿವೃದ್ಧಿ, ಧಾರ್ಮಿಕ ಪರಂಪರೆಯ ಸಂರಕ್ಷಣೆ ಹಾಗೂ ಭಕ್ತರಿಗೆ ಮೂಲಭೂತ ಸೌಲಭ್ಯಗಳನ್ನು ಇನ್ನಷ್ಟು ವಿಸ್ತರಿಸುವ ಕುರಿತು ಈ ವೇಳೆ ಸಚಿವರೊಂದಿಗೆ ಸಂಕ್ಷಿಪ್ತವಾಗಿ ಚರ್ಚಿಸಲಾಯಿತು.
ಸಚಿವರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ರಾಜ್ಯದ ಜನತೆಗೆ ಸುಖ, ಶಾಂತಿ, ಸಮೃದ್ಧಿ ಮತ್ತು ಉತ್ತಮ ಮಳೆಯಾಗಲೆಂದು ಪ್ರಾರ್ಥಿಸಿದರು. ಮಾತುಕತೆ ನಡೆಸಿ ಶುಭಾಶಯಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಮುಖಂಡರು, ಸ್ಥಳೀಯ ಗಣ್ಯರು, ಉಪಸ್ಥಿತರಿದ್ದರು.
